ಬೈಕ್ ಅಪಘಾತ: ಬಿಜೆಪಿ ಮುಖಂಡ ಸಾವು

Posted In : ರಾಜ್ಯ

ಮೈಸೂರು: ತಾಲೂಕಿನ ವೀರಪ್ಪ ಒಡೆಯರಹುಂಡಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಸ್ಕೂಟಿಗೆ ಪಲ್ಸರ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹಿರಿಯ ಬಿಜೆಪಿ ಮುಖಂಡ ಮೃತಪಟ್ಟಿದ್ದು, ಅವರ ಪತ್ನಿ ತೀವ್ರ ಗಾಯಗೊಂಡಿದ್ದಾರೆ.

ಬಿಜೆಪಿ ಮುಖಂಡ ಸಿ.ಎಂ.ಬಸವರಾಜಪ್ಪ(64) ಮೃತ ವ್ಯಕ್ತಿ. ಅವರ ಪತ್ನಿ ಶಾರದಮ್ಮ ಗಾಯಗೊಂಡು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಸಲೆ ತೋಪಿನ ಮಠದಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಪತ್ನಿಯ ಹೊಂಡಾ ಆ್ಯಕ್ಟಿವಾದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಈ ಸಂಬಂಧ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

20 + 15 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top