ರಾಜ್ಯದಲ್ಲಿರುವುದು ದರಿದ್ರ ಸರಕಾರ: ಅನಂತ್‍ ಕುಮಾರ್ ಹೆಗಡೆ ವಾಗ್ದಾಳಿ

Posted In : ರಾಜ್ಯ

ಬೆಳಗಾವಿ: ರಾಜ್ಯ ಸರಕಾರ ಹಾಗೂ ಕಾಂಗ್ರೆಸ್‍ ಅನ್ನು ಟೀಕಿಸುವ ತಮ್ಮ ಎಂದಿನ ಚಾಳಿ ಮುಂದುವರಿಸಿರುವ ಕೇಂದ್ರ ಕೌಶಲ್ಯಾಭಿವೃದ್ಧಿ ಖಾತೆಯ ರಾಜ್ಯ ಸಚಿವ ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತ್‍ ಹೆಗಡೆ ರಾಜ್ಯದಲ್ಲಿರುವುದು ದರಿದ್ದರ ಸರಕಾರ ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ಕಾರಣವಾಗಿದ್ದಾರೆ.

ಬೆಳಗಾವಿ ನಗರದಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ಹುಲಿ ಇದ್ದಂತೆ ಅದಕ್ಕಾಗಿಯೇ ಕಾಂಗ್ರೆಸ್ ಮತ್ತು ಜೆಡಿಎಸ್ ಚುನಾವಣಾ ಫಲಿತಾಂಶ ಬಂದ ತಕ್ಷಣ ಮೈತ್ರಿ ಮಾಡಿಕೊಂಡಿದೆ. ಕಾಂಗ್ರೆಸ್ 70 ವರ್ಷ ದೇಶದಲ್ಲಿ ದರಿದ್ರ ಆಡಳಿತ ನಡೆಸಿದೆ ಎಂದು ಗಡುಗಿದ್ದಾರೆ. ಅಲ್ಲದೇ ರಾಜ್ಯ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಷ್ಟಕ್ಕೆ ಬಿಜೆಪಿ ಅನಿವಾರ್ಯವಾಗಿದ್ದು, 2019ರಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತದೆ. 2019ರ ಚುನಾವಣೆಗೆ ಈಗಲೇ ಕಾರ್ಯಕರ್ತರು ಸಜ್ಜಾಗಬೇಕು. ಮನೆ ಮನೆಗೆ ತೆರಳಿ ಪ್ರಚಾರ ನಡಸಬೇಕು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ten − seven =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top