ಸಾಮಾಜಿಕ ಜಾಲತಾಣಕ್ಕೆ ಬ್ರೇಕ್ ಹಾಕುವ ಕೇಂದ್ರದ ನಿರ್ಧಾರಕ್ಕೆ ಸುಪ್ರಿಂ ತರಾಟೆ

Posted In : ದೇಶ

ದೆಹಲಿ: ಸಾಮಾಜಿಕ ಜಾಲತಾಣಗಳ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರಕಾರದ ನಿಲುವಿನ ಬಗ್ಗೆ ಆಕ್ಷೇಪ ವ್ಯಕ್ತ ಪಡಿಸಿರುವ ಸುಪ್ರಿಂ ಕೋರ್ಟ್ ಇದರಿಂದ ಕಣ್ಗಾವಲು ರಾಜ್ಯ ನಿರ್ಮಾಣಕ್ಕೆ ಮುನ್ನುಡಿ ಬರೆದಂತಾಗುತ್ತದೆ ಎಂದು ಸುಪ್ರಿಂ ಕೋರ್ಟ್ ಕೇಂದ್ರಕ್ಕೆ ಚಾಟಿ ಬೀಸಿದೆ.

ಸಾಮಾಜಿಕ ಜಾಲತಾಣಗಳಿಗೆ ನಿಯಂತ್ರಣ ಹೇರುವುದನ್ನು ವಿರೋಧಿಸಿ ತೃಣಮೂಲ ಕಾಂಗ್ರೆಸ್ ಶಾಸಕ ಮಹುವಾ ಮೊಯ್ಟ್ರಾ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ನ ನ್ಯಾಯಾಂಗ ಪೀಠ ಜಾಲತಾಣದ ಮೇಲೆ ನಿಯಂತ್ರ ಹೇರುವುದು ರಾಜ್ಯದಲ್ಲಿ ಕಣ್ಗಾವಲಿನ ಪರಿಸ್ಥಿತಿಯನ್ನುಂಟು ಮಾಡುತ್ತದೆ ಎಂದು ಅಭಿಪ್ರಾಯ ಪಟ್ಟಿದೆ. ಅರ್ಜಿದಾರರ ಪರ ವಾದ ಮಂಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಅಭಿಷೇಕ್ ಮನು ಸಿಂಘ್ವಿ, ಕೇಂದ್ರ ಸರ್ಕಾರ ಸಾಮಾಜಿಕ ಜಾಲತಾಣಗಳ ಮೇಲೆ ಹಿಡಿತ ಸಾಧಿಸಲು ಹೊರಟಿದೆ. ಇದು ಸರಿಯಲ್ಲ. ಹೀಗಾಗಿ ಕೇಂದ್ರದ ನಿರ್ಧಾರವನ್ನು ಮರು ಪರಿಶೀಲನೆಗೆ ಒಳಪಡಿಸಬೇಕು ಎಂದರು. ವಾದವನ್ನು ಆಲಿಸಿದ ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ದೀಪಕ್​ ಮಿಶ್ರಾ ಅವರು, ಡಿಜಿಟಲ್ ಸೋಷಿಯಲ್​ ಮೀಡಿಯಾ ಮೇಲೆ ನಿಂಯತ್ರಣ ಸಾಧಿಸಿ, ಅಲ್ಲಿನ ವಿಷಯಗಳನ್ನು ಸಂಗ್ರಹಿಸಲು ಕಮ್ಯೂನಿಕೇಷನ್ ಹಬ್ ಸ್ಥಾಪಿಸುವ ಕೇಂದ್ರ ಸರ್ಕಾರದ ನಿರ್ಣಯಕ್ಕೆ ತಡೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ಎ ಎಂ ಖನ್ವಿಲ್ಕರ್ ಮತ್ತು ಡಿ ವೈ ಚಂದ್ರಾಚೂಡ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ನೋಟಿಸ್​ ನೀಡಿದ್ದು, ಎರಡು ವಾರಗಳಲ್ಲಿ ಈ ಪ್ರಶ್ನೆಗೆ ಉತ್ತರಿಸುವಂತೆ ಸೂಚಿಸಿದೆ. ಅಟೊರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಅವರು ಈ ವಿಷಯದಲ್ಲಿ ಸಹಕರಿಸುವಂತೆ ಕೋರ್ಟ್ ಹೇಳಿದೆ. ಅಲ್ಲದೇ ಕೇಂದ್ರ ಸರ್ಕಾರ ಟ್ವಿಟ್ಟರ್, ಇನ್ಸ್ಟಾಗ್ರಾಮ್, ಫೇಸ್ ಬುಕ್ ಸೇರಿದಂತೆ ಇಮೇಲ್ ಗಳ ಖಾತೆಗಳನ್ನು ಪತ್ತೆಹಚ್ಚಿ ಅವುಗಳಲ್ಲಿನ ವಿಷಯಗಳನ್ನು ಸಂಗ್ರಹಿಸಲು ಮೇಲ್ವಿಚಾರಣೆ ಕೇಂದ್ರವೊಂದನ್ನು ಸ್ಥಾಪಿಸಲು ಮುಂದಾಗಿರುವ ಬಗ್ಗೆ ಮಾಹಿತಿ ಇದ್ದು ಅದರ ಬಗೆಗಿನ ವಿವರಗಳನ್ನು ತಿಳಿಸಬೇಕು ಎಂದುಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ಸೂಚನೆ ನೀಡಿದೆ.

Leave a Reply

Your email address will not be published. Required fields are marked *

two × five =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top